ಶ್ರೀಕೃಷ್ಣ ಮಠಕ್ಕೆ ಆಧ್ಯಾತ್ಮ ಗುರು ಶ್ರೀರವಿ ಶಂಕರ್ ಗುರೂಜಿ ಭೇಟಿ
ಉಡುಪಿ: ಪರ್ಯಾಯ ಶ್ರೀಪುತ್ತಿಗೆ ಸುಗುಣೇಂದ್ರ ತೀರ್ಥರ ಶ್ರೀಪಾದರ ಆಹ್ವಾನದ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಆಧ್ಯಾತ್ಮ ಗುರು ಶ್ರೀರವಿಶಂಕರ್ ಗುರೂಜಿ ಅವರು ಭೇಟಿ ನೀಡಿ ಶ್ರೀ ಕೃಷ್ಣ ದರ್ಶನ ಪಡೆದರು.
ಬಳಿಕ ನಡೆದ ಸಭೆಯಲ್ಲಿ ಶ್ರೀಮಠದ ಗೌರವವನ್ನು ಸ್ವೀಕರಿಸಿ ಶ್ರೀಪಾದರ ಭಗವದ್ಗೀತಾ ಅಭಿಯಾನವನ್ನು ಮುಕ್ತವಾಗಿ ಪ್ರಶಂಸಿಸಿ ವಿಶ್ವ ಕಲ್ಯಾಣವನ್ನು ಹಾರೈಸಿದರು.
ಪೂಜ್ಯ ಪರ್ಯಾಯ ಶ್ರೀಪಾದರು ಶ್ರೀ ರವಿಶಂಕರ್ ಗುರೂಜಿಯವರ ಮತ್ತು ತಮ್ಮ ಆತ್ಮೀಯ ಸಂಬಂಧವನ್ನು ಸ್ಮರಿಸುತ್ತ ಅವರಿಂದ ಇನ್ನಷ್ಟು ಶಾಂತಿ ಕಾರ್ಯಕ್ರಮ ನಡೆಯಲಿ ಎಂದು ಹಾರೈಸಿದರು.
ಬಳಿಕ ಗೀತಾ ಮಂದಿರಕ್ಕೆ ಭೇಟಿ ನೀಡಿ ಗೀತಾರತಿಯನ್ನು ನೆರವೇರಿಸಿದರು.
ಪುತ್ತಿಗೆ ಶ್ರೀಪಾದರ ಧರ್ಮಪ್ರಚಾರ ಕಾರ್ಯಯೋಜನೆ ಅಭಿನಂದನೀಯ ಶ್ರೀ ರವಿಶಂಕರ ಗುರೂಜಿ. ದೇಶ ವಿದೇಶಗಳಲ್ಲಿ ನಿರಂತರವಾಗಿ ಸಂಚರಿಸುತ್ತಾ ಧರ್ಮಪ್ರಚಾರ ಕಾರ್ಯವನ್ನು ಯಶಸ್ವಿಯಾಗಿ ನಡೆಸುತ್ತಿರುವ ಪುತ್ತಿಗೆ ಶ್ರೀಪಾದರ ಕಾರ್ಯಯೋಜನೆ ಅಭಿನಂದನೀಯವಾಗಿದೆ.
ಆಹಾರಗಳ ನಿಯಮ, ಅನುಷ್ಠಾನಗಳ ಆಚರಣೆ ಗಳಿಂದ ಯತಿಧರ್ಮದ ಕಠಿಣ ಆಚರಣೆಯನ್ನು ನಡೆಸುತ್ತಾ ಶ್ರೀಕೃಷ್ಣ ಮಂದಿರಗಳನ್ನು ಪ್ರತಿಷ್ಠಾಪಿಸಿ ದ್ದಾರೆ. ಕಳೆದ ನಲವತ್ತು ವರ್ಷಗಳ ಸುದೀರ್ಘವಾದ ಆತ್ಮೀಯತೆ ನಮ್ಮಿಬ್ಬರಲ್ಲಿ ದೃಢವಾಗಿದೆ. ಅವರ ಪರ್ಯಾಯವು ಅತ್ಯಂತ ಯಶಸ್ವಿಯಾಗಿ ನೆರವೇರಲಿ ಹಾಗೂ ಕೋಟಿ ಗೀತಾ ಲೇಖನ ಯಜ್ಞದ ಕಾರ್ಯಕ್ರಮವು ನಿರ್ವಿಘ್ನವಾಗಿ ನಡೆಯಲಿ
ಎಂದು ಅಂತಾರಾಷ್ಟ್ರೀಯ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮುಖ್ಯಸ್ಥರಾದ ಪೂಜ್ಯ ಶ್ರೀ ರವಿಶಂಕರ ಗುರೂಜಿ ಅವರು ತಿಳಿಸಿದರು.
ಅವರು ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ಆಮಂತ್ರಣದಂತೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಶ್ರೀ ರವಿಶಂಕರ ಗುರೂಜಿ ಅವರಿಗೆ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದಂಗಳವರು ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳ ವರು ಆತ್ಮೀಯವಾಗಿ ಬರಮಾಡಿಕೊಂಡರು. ಶ್ರೀಮಠದ ವಿದ್ವಾಂಸರು ಅಧಿಕಾರಿಗಳು ಪೂರ್ಣಕುಂಭ ಸ್ವಾಗತವನ್ನು ನೀಡಿದರು.
ದೇವರ ದರ್ಶನವನ್ನು ಮಾಡಿಸಿ ದೇವರ ಪ್ರಸಾದವನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರ್ಯಾಯ ಪೀಠಾಧಿಪತಿಗಳಾದ
ಪರಮಪೂಜ್ಯ ಶ್ರೀಸುಗುಣೇಂದ್ರತೀರ್ಥಶ್ರೀಪಾದರು
ಶ್ರೀ ರವಿಶಂಕರ ಗುರೂಜಿ ಅವರಲ್ಲಿ ಶ್ರೀಕೃಷ್ಣನೇ ನಿಂತು ಅಮೋಘವಾದ ಕಾರ್ಯವನ್ನು ನಡೆಸುತ್ತಿದ್ದಾನೆ. ಅಪಾರ ಶಿಷ್ಯರನ್ನು ಹೊಂದಿರುವ ಶ್ರೀ ರವಿಶಂಕರ ಗುರೂಜಿ ಅವರು ಅದ್ವಿತೀಯ ಸಾಧನೆಯನ್ನು ಮಾಡಿದ್ದಾರೆ. ನಮ್ಮ ಉಪಾಸ್ಯನಾದ ಶ್ರೀಕೃಷ್ಣ ಮತ್ತು ಮುಖ್ಯಪ್ರಾಣ ದೇವರು ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಿಸಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ಮಾನ್ಯ ಶಾಸಕರಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅನೇಕ ಭಕ್ತರು ಉಪಸ್ಥಿತರಿದ್ದರು.