ಎಎಪಿಯ ಕುಲದೀಪ್ ಕುಮಾರ್ ಚಂಡೀಗಢದ ಚುನಾಯಿತ ಮೇಯರ್ ಸುಪ್ರೀಂ ಕೋರ್ಟ್ ಘೋಷಣೆ

ನವದೆಹಲಿ: ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಚಂಡೀಗಢದ ಚುನಾಯಿತ ಮೇಯರ್ ಎಂದು ಸುಪ್ರೀಂ ಕೋರ್ಟ್ ಇಂದು ಘೋಷಿಸಿದೆ.

ಇದಕ್ಕು ಮುನ್ನ 8 ‘ಅಸಿಂಧು’ ಮತಗಳನ್ನು ಸೇರಿಸಿ ಮತಗಳ ಮರುಎಣಿಕೆ ಮಾಡುವಂತೆ ನಿರ್ದೇಶಿಸಿದ್ದ ಸುಪ್ರೀಂ ಕೋರ್ಟ್, ಈಗ ಮರು ಎಣಿಕೆಯ ನಂತರ ಫಲಿತಾಂಶ ಪ್ರಕಟಿಸಿದೆ.

ಈ ಹಿಂದೆ ಮತಪತ್ರಗಳನ್ನು ತಿರುಚಿ ಬಿಜೆಪಿ ಅಭ್ಯರ್ಥಿಯನ್ನು ಮೇಯರ್‌ ಎಂದು ಘೋಷಿಸಿದ್ದ ರಿಟರ್ನಿಂಗ್‌ ಅಧಿಕಾರಿ ಅನಿಲ್‌ ಮಸೀಹ್‌ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠ ಆದೇಶಿಸಿದೆ.

ಚುನಾವಣಾ ಅಧಿಕಾರಿ ಉದ್ದೇಶಪೂರ್ವಕವಾಗಿ ಮತಪತ್ರಗಳನ್ನು ತಿರುಚಿದ್ದಾರೆ. ಅವರ ದುಷ್ಕೃತ್ಯಕ್ಕಾಗಿ ಕಾನೂನು ಕ್ರಮ ಜರುಗಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ.

ಸೋಮವಾರ ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆಗೆ ಹಾಜರಾದ ಚುನಾವಣಾ ಅಧಿಕಾರಿ ಅನಿಲ್‌ ಮೆಸಿಹ್‌ ಅವರು ಮತಪತ್ರಗಳನ್ನು ತಿರುಚಿದ್ದನ್ನು ಒಪ್ಪಿಕೊಂಡಿದ್ದರು. ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರ ನೇತೃತ್ಬದ ಪೀಠ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಸೂಚಿಸಿತ್ತಲ್ಲದೆ ಕುದುರೆ ವ್ಯಾಪಾರದ ವಿರುದ್ಧ ಕಳವಳ ವ್ಯಕ್ತಪಡಿಸಿತ್ತು.

ಈ “ಕಷ್ಟದ ಸಮಯದಲ್ಲಿ” ಸುಪ್ರೀಂ ಕೋರ್ಟ್ ಪ್ರಜಾಪ್ರಭುತ್ವವನ್ನು ಉಳಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ. ಚಂಡೀಗಢ ಮೇಯರ್ ಚುನಾವಣೆ ಪ್ರಕರಣದಲ್ಲಿ ನ್ಯಾಯಾಲಯದ ನಿರ್ಧಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!