ಸಂವಿಧಾನದ ಕರ್ತವ್ಯಗಳನ್ನು ಪಾಲಿಸಿ, ಉತ್ತಮ ಪ್ರಜೆಗಳಾಗಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಉಡುಪಿ, ಫೆ.20: ನಾಗರಿಕರು ಸಂವಿಧಾನದಡಿಯಲ್ಲಿ ನೀಡಿರುವ ಹಕ್ಕುಗಳನ್ನು ಪಡೆದುಕೊಳ್ಳುವ ರೀತಿಯಲ್ಲಿಯೇ ಸಂವಿಧಾನದ ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಉತ್ತಮ ಪ್ರಜೆಗಳಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಜಿಲ್ಲೆಯಾದ್ಯಂತ ಸಂಚರಿಸಿದ ಸಂವಿಧಾನ ಜಾಗೃತಿ ಜಾಥಾದಿಂದ ಸಂವಿಧಾನದ ಕುರಿತು ಸಾಕಷ್ಟು ಅರ್ಥವನ್ನು ಕಂಡುಕೊAಡಿದ್ದೇವೆ. ಸಂವಿಧಾನ ಜಾಗೃತಿ ಜಾಥಾದಲ್ಲಿ ಪಾಲ್ಗೊಳ್ಳುವ ಮೂಲಕ ಸಂವಿಧಾನ ಜಾಗೃತಿಯನ್ನು ಹೆಚ್ಚಾಗಿ ಅಳವಡಿಸಿಕೊಳ್ಳಬೇಕು. ಭಾರತದ ನಾಗರಿಕರು ತಮಗಿರುವ ಹಕ್ಕುಗಳನ್ನು ಧ್ವನಿಯೇರಿಸುವ ಮೂಲಕ ಪಡೆದುಕೊಳ್ಳಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಸಂವಿಧಾನ ನಮಗೆ ದಾರಿದೀಪವಾಗಿದೆ ಎಂದರು.

ನಗರಸಭಾ ಸದಸ್ಯ ವಿಜಯ್ ಕೊಡವೂರು ಮಾತನಾಡಿ, ಸಂವಿಧಾನ ಜಾಗೃತಿ ಕಾರ್ಯಕ್ರಮದ ಉದ್ದೇಶಗಳು ಇವತ್ತಿಗೆ ಮುಗಿಯುವುದಿಲ್ಲ. ನಮ್ಮ ನಡೆ ನುಡಿಗಳಲ್ಲಿ ದೇಶದ ಬಗ್ಗೆ ಗೌರವ ಹೊಂದಿರಬೇಕು. ಯುವಶಕ್ತಿ ದೇಶದ ಶಕ್ತಿಯಾಗಿದ್ದು, ಅವರುಗಳನ್ನು ಜಾಗೃತಗೊಳಿಸಬೇಕು. ವಿದ್ಯಾಭ್ಯಾಸದ ಜೊತೆ ಜೊತೆಗೆ ದೇಶದ ರಕ್ಷಣೆಯ ಸಂದರ್ಭದಲ್ಲಿ ಯುವಜನತೆ ಮುಂದಾಗಬೇಕು ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಂವಿಧಾನ ಪೀಠಿಕೆ ಬೋಧಿಸಿದರು. ಅಶ್ಮಿತ್ ಎ.ಜೆ ಸಂವಿಧಾನ ಪೀಠಿಕೆ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿದರು.

ಈ ಸಂದರ್ಭದಲ್ಲಿ ಸಂವಿಧಾನ ಜಾಗೃತಿ ಅಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಂಬೇಡ್ಕರ್ ಭಾವಚಿತ್ರವನ್ನು ರಂಗೋಲಿ ಹಾಗೂ ತೆಂಗಿನ ಗರಿಗಳಲ್ಲಿ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಜಯಂತಿ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಸವಿತಾ ಹರೀಶ್ ರಾಮ್, ಹರೀಶ್ ಶೆಟ್ಟಿ, ಪ್ರಭಾಕರ ಪೂಜಾರಿ, ಎಎಸ್ಪಿ ಸಿದ್ದಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರುವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.

Leave a Reply

Your email address will not be published. Required fields are marked *

error: Content is protected !!