ಉಡುಪಿ: ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ- ಡಾ.ಕೆ.ಕೃಷ್ಣ ಪ್ರಸಾದ್

ಉಡುಪಿ: ವಾಹನ ಚಾಲಕರು ಸಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಂಡು ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ನಗರದ ಪ್ರಸಾದ್ ನೇತ್ರಾಲಯದ ಹಿರಿಯ ವೈದ್ಯರಾದ ಡಾ.ಕೆ. ಕೃಷ್ಣಪ್ರಸಾದ್ ಹೇಳಿದ್ದಾರೆ.

ಮಣಿಪಾಲದ ಪ್ರಾದೇಶಿಕ ಸಾರಿಗೆ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಉಡುಪಿ ವತಿ ಯಿಂದ ಸೋಮವಾರ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತದ ಪ್ರಕರಣಗಳು ಹೆಚ್ಚುತ್ತಿವೆ. ಅಪಘಾತದಲ್ಲಿ ಮರಣ ಹಾಗೂ ತೀವ್ರತರದ ಹಾನಿ ಉಂಟಾದ ಕುಟುಂಬ ವರ್ಗದವರು ಸಂಕಷ್ಟ ಅನುಭವಿಸುವುದನ್ನು ನಾವು ಕಾಣುತ್ತಿದ್ದೇವೆ. ರಸ್ತೆ ಸುರಕ್ಷತೆ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೇ ಪಾಲಿಸು ವುದರಿಂದ ರಸ್ತೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದವರು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಪಿ.ರವಿಶಂಕರ್, ಚಾಲಕರು ರಸ್ತೆಗಳಲ್ಲಿ ಎಡಬದಿಯಲ್ಲಿ ಚಲಿಸಬೇಕು. ವಿರುದ್ಧ ದಿಕ್ಕಿನಲ್ಲಿ ಚಲಿಸಬಾರದು. ಚಾಲನೆಯಲ್ಲಿ ಮೊಬೈಲ್ ಬಳಸ ಬಾರದು. ಎಲ್ಲಾ ಚಾಲ ಕರು ರಸ್ತೆ ಸುರಕ್ಷತೆಯ ನಿಯಮಗಳನ್ನು ಅನುಸರಿಸಿ ಸುರಕ್ಷಿತ ಚಾಲನೆ ಮಾಡಬೇಕು ಎಂದರು. ಡಾ.ವಿಜಯೇಂದ್ರ ಅವರೂ ಮಾತನಾಡಿದರು.

ಈ ಸಂದರ್ಭ ರಸ್ತೆ ಸುರಕ್ಷತೆ ಕುರಿತ ಕಿರುಚಿತ್ರವನ್ನು ಪ್ರದರ್ಶಿಸ ಲಾಯಿತು. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಕೈಪಿಡಿ ಮತ್ತು ರಸ್ತೆ ಸುರಕ್ಷತೆ ಕುರಿತು ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನವನ್ನು ವಿತರಿಸಲಾುತು. ಪ್ರಸಾದ್ ನೇತ್ರಾಲಯದಿಂದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಭಾಸ್ಕರ್ ರಾವ್ ಪೇತ್ರಿ, ಅಧೀಕ್ಷಕ ಪಮಿತ, ಡಾ.ಅತುಲ್ ,ಡಾ.ವಿಜೇಶ್ ಉಪಸ್ಥಿತರಿ ದ್ದರು. ಪ್ರಾದೇಶಿಕ ಸಾರಿಗೆ ಕಛೇರಿಯ ಶಾಂತರಾಜು ಸ್ವಾಗತಿಸಿ, ಹಿರಿಯ ಮೋಟಾರು ವಾಹನ ನಿರೀಕ್ಷಕ ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!