ಉತ್ತರ ಪ್ರದೇಶ: 18 ವರ್ಷದ ದಲಿತ ಯುವತಿ ಮೇಲೆ ಅತ್ಯಾತಾರ, ಕತ್ತುಹಿಸುಕಿ ಕೊಲೆ
ಬಾರಬಂಕಿ: ಉತ್ತರ ಪ್ರದೇಶದ ಬಾರಬಂಕಿಯಲ್ಲಿ 18 ವರ್ಷದ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕೃಷಿ ಭೂಮಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಎಸ್ಪಿ ಆರ್. ಎಸ್. ಗೌತಮ್ ತಿಳಿಸಿದ್ದಾರೆ.
ಅತ್ಯಾಚಾರಕ್ಕೆ ಸಂಬಂಧಿಸಿದ ಆರೋಪಗಳನ್ನು ಸತ್ರಿಖ್ ಪೊಲೀಸ್ ಠಾಣೆಯಲ್ಲಿ ನೋಂದಾಯಿಸಿರುವ ಎಫ್ಐಆರ್ನಲ್ಲಿ ಸೇರಿಸಲಾಗುವುದು ಎಂದ ಅವರು, ಕೆಲವು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹೊಲಕ್ಕೆ ಹೋದ ತನ್ನ ಮಗಳು ವಾಪಸ್ ಬಂದಿಲ್ಲ ಎಂದು ಯುವತಿಯ ತಂದೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದಾದ ನಂತರ ಆಕೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ತಂಡ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದೆ.