ಕಟ್ಟಡ ಕಾರ್ಮಿಕರ ನೋಂದಣಿಗೆ ನಕಲಿ ದಾಖಲೆ ಸಲ್ಲಿಕೆ ಶಿಕ್ಷಾರ್ಹ ಅಪರಾಧ
ಕಾರವಾರ. ಫೆ.21: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ
ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ವಿವರ ಮತ್ತು ಸಾರ್ವಜನಿಕರಲ್ಲಿ ಮನವಿ, ನಿಜವಾದ ಕಟ್ಟಡ ಕಾರ್ಮಿಕರಲ್ಲದವರು ನಕಲಿ ದಾಖಲೆಗಳನ್ನು ಸಲ್ಲಿಸಿ ಮಂಡಳಿಯಲ್ಲಿ ನೊಂದಾಯಿಸುವುದು ಮತ್ತು ಸೌಲಭ್ಯಗಳನ್ನು ಪಡೆಯುವುದು ಶಿಕ್ಷಾರ್ಹ ಅಪರಾಧ. ಇಂತಹ ಕಾರ್ಮಿಕರು ತಾವೆ ಖುದ್ದಾಗಿ ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರ ಕಛೇರಿಗೆ ತೆರಳಿ ಗುರುತಿನ ಚೀಟಿಯನ್ನು ಹಿಂದಿರಿಗಿಸುವ ಮೂಲಕ ತಮ್ಮ ನೊಂದಣಿಯನ್ನು ರದ್ದು ಪಡೆಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾರ್ಮಿಕರ ಇಲಾಖೆಯ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ನಕಲಿ ಕಾರ್ಮಿಕರು ಈಗಾಗಲೇ ನೊಂದಣಿ ಪತ್ರ ಪಡೆದಲ್ಲಿ ತಕ್ಷಣವೇ ಕಾರ್ಮಿಕ ಇಲಾಖೆ ಕಛೇರಿಗೆ ಹಿಂದಿರುಗಿಸಬೇಕು ನಂತರ ದಿನಗಳಲ್ಲಿ ಒಂದು ವೇಳೆ ನಕಲಿ ಕಾರ್ಮಿಕರೆಂದು ಕಂಡು ಬ0ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಉಪಸ್ಥಿತರಿದ್ದರು. ಕೋರ್ಟ್ ಆವರಣದಲ್ಲಿ ನಡೆದ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಜಯಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಮುಲ್ಲಾ ಮತ್ತು ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.