ಸರ್ಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ಸಿಗಬೇಕು- ಡಾ.ಎಚ್. ಎಸ್.ಶೆಟ್ಟಿ

ಕುಂದಾಪುರ: ಮಾಧ್ಯಮ ಕ್ಷೇತ್ರದಲ್ಲಿ ಹೊಸಹೊಸ ಬದಲಾವಣೆಗಳು ಆಗುತ್ತಿವೆ. ಜನರ ಧ್ವನಿಯಾಗಿ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹಿರಿಯ ಉದ್ಯಮಿ ಡಾ.ಎಚ್.ಎಸ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕೋಟೇಶ್ವರದ ಸಹನಾ ಕನ್ವೆನ್ಷನ್ ಸೆಂಟರ್‌ನ ಸುಮುಖಾ ಮಿನಿ ಹಾಲ್‌ನಲ್ಲಿ ನಡೆದ ಬೆಳಗಾವಿ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಗೌರವ ಪಡೆದಿರುವ ಹಾಲಾಡಿ ಕುದ್ರುಮನೆ ಶ್ರೀನಿವಾಸ ಶೆಟ್ಟಿ ಅವರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಪತ್ರಿಕಾ ಮಾಧ್ಯಮ ಕ್ಷೇತ್ರಕ್ಕೆ ಹೊಸ ತಾಂತ್ರಿಕತೆ, ಡಿಜಿಟಲ್ ಮಾಧ್ಯಮಗಳ ಪ್ರವೇಶವಾಗಿದೆ. ಹೊಸ ಹೊಸ ಸವಾಲುಗಳನ್ನು ಸ್ವೀಕರಿಸಿ ಅದನ್ನು ಅಳವಡಿಸಿ ಕೊಂಡು ಮುನ್ನೆಡೆಯುವ ಸಂದಿಗ್ದತೆಯೂ ಪ್ರಸ್ತುತ ಇದೆ. ಓದುವ ಆಸಕ್ತಿ ಯುವ ಜನಾಂಗದಲ್ಲಿ ಬೆಳೆಯಬೇಕು ಎಂದರು. ನಂತರ ನಡೆದ ಸಂವಾದದಲ್ಲಿ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

ಕೋವಿಡ್ ಬಳಿಕ ಸಣ್ಣ ವ್ಯವಹಾರಗಳಿಗೆ ತೊಂದರೆಯಾಗಿದೆ. ದೊಡ್ಡ ಉದ್ಯಮಗಳಿಗೆ ಅಂತಹ ಸಮಸ್ಯೆಯಾಗಲಿಲ್ಲ. ಈಗ ಎಲ್ಲವೂ ಸರಿಯಾಗಿದೆ. ಶಿಕ್ಷಣ ವ್ಯವಸ್ಥೆ ಬಲಿಷ್ಠವಾಗಬೇಕು. ಸರ್ಕಾರಿ ಶಾಲೆಗಳು ಬಲಹೊಂದಬೇಕು. ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ದೊರಕುವಂತಾಗಬೇಕು ಎಂದರು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಾ.ಎಚ್.ಎಸ್.ಶೆಟ್ಟಿ ಅವರನ್ನು ಸನ್ಮಾನಿಸಲಾ ಯಿತು. ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಟಿ. ಲೋಕೇಶ್ ಆಚಾರ್ಯ ತೆಕ್ಕಟ್ಟೆ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಗಣೇಶ ಬೀಜಾಡಿ ಸ್ವಾಗತಿಸಿದರು. ರಾಘವೇಂದ್ರ ಪೈ ಸನ್ಮಾನ ಪತ್ರ ವಾಚಿಸಿದರು. ಸತೀಶ್ ಆಚಾರ್ಯ ಉಳ್ಳೂರು ಪ್ರಸ್ತಾವನೆಗೈದರು. ಶ್ರೀಕರ ವಂದಿಸಿದರು. ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

error: Content is protected !!