ಶೋಭಾ ಕರಂದ್ಲಾಜೆ ವಿರುದ್ಧ ಮತ್ತೆ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು: ಟಿಕೆಟ್ ನೀಡದಂತೆ ಹೈಕಮಾಂಡ್‌ಗೆ ಪತ್ರ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್​ ನೀಡುವ ವಿಚಾರದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಈ ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರು ಪತ್ರ ಅಭಿಯಾನ ಆರಂಭಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಂಚೆಯ ಮೂಲಕ ಪತ್ರ ಕಳುಹಿಸಲು ಆರಂಭಿಸಿದ್ದಾರೆ.

ಕೆಲದಿನಗಳ ಹಿಂದೆಯಷ್ಟೇ ಉಡುಪಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿ ಶೋಭಾ ಕರಂದ್ಲಾಜೆಯವರನ್ನು ಮೀನುಗಾರ ಮುಖಂಡರಿಂದ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆಯ ಬೆನ್ನಲ್ಲೇ ಈ ಬೆಳವಣಿಗೆ ಆರಂಭಗೊಂಡಿದೆ.

1 thought on “ಶೋಭಾ ಕರಂದ್ಲಾಜೆ ವಿರುದ್ಧ ಮತ್ತೆ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು: ಟಿಕೆಟ್ ನೀಡದಂತೆ ಹೈಕಮಾಂಡ್‌ಗೆ ಪತ್ರ

  1. Yes she is an idle MP. No development work in Udupi, Chikmagalur. Sringeri karkal road, 1 km road not yet finished in 2 years. Udupi Agumbe Road people are expected since 10-15 yrs.

Leave a Reply

Your email address will not be published. Required fields are marked *

error: Content is protected !!