ಸುಪ್ರೀಂಗೆ ತಪ್ಪೊಪ್ಪಿಗೆ ಸಲ್ಲಿಸಿದ ಅರವಿಂದ್ ಕೇಜ್ರಿವಾಲ್
ನವದೆಹಲಿ, ಫೆ 26: ಬಿಜೆಪಿ ಐಟಿ ಸೆಲ್ ಗೆ ಸಂಬಂಧಿಸಿದ ಮಾನಹಾನಿಕರ ಎನ್ನಲಾದ ವಿಡಿಯೋವನ್ನು ನನ್ನಿಂದ ತಪ್ಪಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಇಂದು ಸುಪ್ರೀಂ ಕೋರ್ಟ್ ಗೆ ತಪ್ಪೊಪ್ಪಿಗೆ ಸಲ್ಲಿಸಿದ್ದಾರೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯೊಂದರಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿತ್ತು. ತಮಗೆ ನೀಡಲಾಗಿದ್ದ ಸಮನ್ಸ್ ಅನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕ್ರೇಜಿವಾಲ್ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾ. ಸಂಜೀವ್ ಖನ್ನಾ ಮತ್ತು ನ್ಯಾ. ದೀಪಾಂಕರ್ ದತ್ತಾ ಅವರಿದ್ದ ಪೀಠವು ನಡೆಸಿತು. ಈ ಘಟನೆಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರು ತಪ್ಪೊಪ್ಪಿಕೊಂಡ ಹಿನ್ನೆಲೆ ’ಈ ಪ್ರಕರಣ ವನ್ನು ಇಲ್ಲಿಗೆ ಮುಕ್ತಾಯಗೊಳಿಸುವಿರಾ’ ಎಂದು ದೂರುದಾರರನ್ನು ಪೀಠವು ಕೇಳಿತ್ತು. ಜೊತೆಗೆ ಕೇಜ್ರಿವಾಲ್ ಅವರ ಪ್ರಕರಣವನ್ನು ಮಾ. 11 ರವರೆಗೆ ಕೈಗೆತ್ತಿಕೊಳ್ಳಬಾರದೆಂದು ವಿಚಾರಣಾ ಸಮಿತಿ ನ್ಯಾಯಾಲಯಕ್ಕೆ ಸೂಚಿಸಿದೆ. ಕೇಜ್ರಿವಾಲ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಹಾಜರಿದ್ದರು.