ರಾಜ್ಯ ಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್
ಬೆಂಗಳೂರು: ಇಂದು ನಡೆಯುತ್ತಿರುವ ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ ಎಂದು ಬಿಜೆಪಿಯ ಮೂಲವು ಖಚಿತಪಡಿಸಿದೆ.
ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ’ ಎಂದರು.
ಸೋಮಶೇಖರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.
ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ ಆದರೆ ಅವರು ಯಾವುದೇ ಕಾಲಾವಕಾಶ ನೀಡಿಲ್ಲ. ಅಭಿವೃದ್ಧಿಗೆ ಅನುದಾನ ನೀಡವವರ ಪರ ಮತ ಚಲಾಯಿಸಿದ್ದೇನೆ ಎಂದಿದ್ದಾರೆ.