ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟ: ಕಾಂಗ್ರೆಸ್ಗೆ 3, ಬಿಜೆಪಿಗೆ 1 ಸ್ಥಾನ
ಬೆಂಗಳೂರು : ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ.
ಕಾಂಗ್ರೆಸ್ನ ಅಜಯ್ ಮಾಕನ್ -47, ನಾಸೀರ್ ಹುಸೈನ್ – 47, ಜಿ.ಸಿ. ಚಂದ್ರಶೇಖರ್ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ ಎಂದು ತಿಳಿದು ಬಂದಿದೆ.