ರಾಜ್ಯಸಭೆ ಚುನಾವಣೆ ಗೆಲುವು: ನಾಸಿರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ
ಬೆಂಗಳೂರು: ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು, ಬಿಜೆಪಿಯ ಓರ್ವ ಅಭ್ಯರ್ಥಿ ಸಂಸತ್ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗುವ ಮೂಲಕ ಗೆಲುವಿನ ಸಂಭ್ರಮಾಚರಣೆ ಮಾಡಿದ್ದಾರೆ.
ಮಾಧ್ಯಮಗಳಲ್ಲಿ ಪಾಕ್ ಜಿಂದಾಬಾದ್ ಘೋಷಣೆ ವೀಡಿಯೋ ವೈರಲ್ ಆಗತೊಡಗಿವೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಾಸೀರ್ ಹುಸೇನ್ ಪರ 47 ಮತಗಳು ಚಲಾವಣೆಯಾಗಿದೆ. ನಾಸಿರ್ ಹುಸೇನ್ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿದ್ದಾಗ ಅವರ ಹಿಂದೆ ನಿಂತಿದ್ದ ಯುವಕ 2 ಬಾರಿ ಘೋಷಣೆ ಕೂಗಿದ್ದಾನೆ.
ಘೋಷಣೆ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡುತ್ತಿದ್ದಂತೆಯೇ ನಾಸಿರ್ ಹುಸೇನ್ ಮಾಧ್ಯಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ.