ಉಡುಪಿ: ಲಾಡ್ಜ್ ಮ್ಯಾನೇಜರ್ ನಾಪತ್ತೆ
ಉಡುಪಿ, ಮಾ.1: ನಗರದ ಲಾಡ್ಜ್‌ವೊಂದರಲ್ಲಿ ಮ್ಯಾನೇಜರ್ ಕೆಲಸ ಮಾಡಿಕೊಂಡಿದ್ದ ಸೈಯದ್ ಇಮ್ರಾನ್ (41) ಎಂಬವರು ಫೆ.23ರಂದು ಲಾಡ್ಜ್‌ನಿಂದ ಕೆಲಸದ ನಿಮಿತ್ತ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
170 ಸೆಂ.ಮೀ. ಎತ್ತರ, ದಪ್ಪ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.