ಹಿರಿಯಡ್ಕ: ವ್ಯಕ್ತಿ ನಾಪತ್ತೆ
ಉಡುಪಿ, ಮಾ.1: ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಹಿರಿಯಡ್ಕ ನಿವಾಸಿ ವಾಸು ಶೇರಿಗಾರ್ (57) ಎಂಬವರು ಫೆ.22ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿ ದ್ದಾರೆ.
5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.