ಮುದರಂಗಡಿ ಸೇತುವೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ
ಕಾಪು: ವಿಧಾನಸಭಾ ಕ್ಷೇತ್ರದ ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದರಂಗಡಿ – ಶಿರ್ವ – ನಿಂಜೂರು ರಸ್ತೆಯ ಶಿಥಿಲಗೊಂಡ ಸೇತುವೆ ಪುನರ್ ನಿರ್ಮಾಣಕ್ಕೆ 75 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಮುದರಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಶಿವರಾಮ್ ಭಂಡಾರಿ, ರವೀಂದ್ರ ಪ್ರಭು, ಇಂದಿರಾ ಆಚಾರ್ಯ, ಪ್ರಮೀಳಾ ಪೂಜಾರಿ, ಸ್ಥಳೀಯರಾದ ವಿಶ್ವನಾಥ ಶೆಟ್ಟಿ, ಮಂಜಯ್ಯ ಶೆಟ್ಟಿ, ಶಶಿಧರ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮುತ್ತು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.