ಲೋಕಸಭೆ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಪಡೆಯಲು ಹಠ ತೊಟ್ಟಿರುವ ಬಿಜೆಪಿಯು ಮೊದಹಲ ಹಂತದ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 195 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ. ಇಬ್ಬರು ಮಾಜಿ ಸಿಎಂಗಳಿಗೆ ಟಿಕೆಟ್ ನೀಡಲಾಗಿದೆ. ಮೊದಲ ಪಟ್ಟಿಯಲ್ಲಿ 34 ಸಚಿವರು ಹಾಗೂ 28 ಮಹಿಳೆಯರಿಗೆ ಟಿಕೆಟ್ ಘೋಷಿಸಲಾಗಿದೆ.
ಎಸ್ಸಿ ಸಮುದಾಯದ 27 ಅಭ್ಯರ್ಥಿಗಳು ಟಿಕೆಟ್ ನೀಡಲಾಗಿದೆ. ಎಸ್ಟಿ 18,, ಒಬಿಸಿ 58 ಮಂದಿಗೆ ಮೊದಲ ಪಟ್ಟಿಯಲ್ಲಿಯೇ ಘೋಷಿಸಲಾಗಿದೆ. ಉತ್ತರ ಪ್ರದೇಶದ 51 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಖೈರುಗೊಳಿಸ ಲಾಗಿದೆ. ವಾರಣಾಯಿಸಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಮಾಡಲಿದ್ದಾರೆ. ಗಾಂಧಿನಗರದಿಂದ ಅಮಿತ್ ಶಾ, ಲಖನೌದಿಂದ ರಾಜನಾಥ್ ಸಿಂಗ್ ಕಣಕ್ಕಿಳಿಯಲಿದ್ದರೆ, ಸುಷ್ಮಾ ಸ್ವರಾಜ್ ಪುತ್ರಿಗೆ ಟಿಕೆಟ್ ನೀಡಲಾಗಿದೆ. ಚಾಂದಿನಿ ಚೌಕ್ ಪ್ರವೀಣ್ ಅವರು ಸ್ಪರ್ಧೆ ಮಾಡಲಿದ್ದಾರೆ. ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 51 ಕ್ಷೇತ್ರಕ್ಕೆ ಘೋಷಣೆ ಮಾಡಲಾಗಿದೆ.