ಪಾಕ್ ಪರ ಘೋಷಣೆ- ಮೂವರು ಆರೋಪಿಗಳ ಬಂಧನ
ಬೆಂಗಳೂರು: ವಿಧಾನಸೌಧದ ಕಾರಿಡಾರ್ ನಲ್ಲಿ ‘ಪಾಕಿಸ್ಥಾನ ಜಿಂದಾಬಾದ್’ ಎಂಬ ದೇಶದ್ರೋಹಿ ಘೋಷಣೆ ಕೂಗಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಸೋಮವಾರ ಬಂಧಿಸಲಾಗಿದೆ.
ವಿಧಾನ ಸೌಧ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಇಲ್ತಾಜ್, ಮುನಾವರ್ ಮತ್ತು ಮೊಹಮದ್ ನಾಶಿಪುಡಿ ಎಂಬವರನ್ನು ಬಂಧಿಸಿದ್ದಾರೆ.
ಆರ್.ಟಿ.ನಗರದ ಮುನಾವರ್, ಇಲ್ತಾಜ್ ದಿಲ್ಲಿ ಮೂಲದವನು ಎಂದು ತಿಳಿದುಬಂದಿದೆ. ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರಕಾರ ಘಟನೆ ನಡೆದ ದೃಶ್ಯಗಳನ್ನು ಎಫ್ಎಸ್ಎಲ್ಗೆ ರವಾನಿಸಿತ್ತು. ಎಫ್ಎಸ್ಎಲ್ ವರದಿ ದೃಢವಾದ ಹಿನ್ನೆಲೆ ಮೂವರ ಬಂಧನವಾಗಿದೆ ಎನ್ನಲಾಗಿದೆ.
ಸದ್ಯ ಮೂವರು ಆರೋಪಿಗಳನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.