ಅ.19ರಿಂದ ಉತ್ತರ, ದಕ್ಷಿಣ ಮತ್ತು ಕರಾವಳಿಗಳಲ್ಲಿ ಭಾರೀ ಮಳೆಯಾಗಲಿದೆ: ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದ ಉತ್ತರ ಭಾಗ ಹಾಗೂ ಕರಾವಳಿ ಪ್ರದೇಶಗಳಲ್ಲಿ ಸೋಮವಾರದಿಂದ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು. ಬಂಗಾಳಕೊಲ್ಲಿಯಲ್ಲಾಗಿರುವ ವಾಯುಭಾರ ಕುಸಿತದ ಪರಿಣಾಮ ಅಕ್ಟೋಬರ್ 19ರಿಂದ ಕರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಿದ್ದಾರೆ.
ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಹಾಗೂ ದಕ್ಷಿಣ ಭಾಗದ ಕರಾವಳಿ ತೀರ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಬಾರಿ ನವೆಂಬರ್ ತಿಂಗಳವರೆಗೂ ಮಳೆಯಾಗುವ ಸಾಧ್ಯತೆಗಳಿವೆ. ಮುಂಗಾರು ಸಮಯದಲ್ಲಿ ರಾಜ್ಯದಲ್ಲಿ ಶೇ.49ರಷ್ಟು ಮಳೆಯಾಗಿದೆ. ಅಕ್ಟೋಬರ್ ತಿಂಗಳೊಂದರಲ್ಲಿಯೇ ಶೇ.53ರಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.