ಡಿಕೆಶಿಗೆ ಬಿಗ್ ರಿಲೀಫ್: ಇ.ಡಿ ದಾಖಲಿಸಿದ್ದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ನವದೆಹಲಿ: ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಿಂದ ಈ ತೀರ್ಪು ಹೊರಬಿದ್ದಿದೆ. ಡಿಕೆ ಶಿವಕುಮಾರ್ ಅವರ ಮೇಲಿದ್ದ ಇಡಿ 120 B ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ತೀರ್ಪು ನೀಡಲಾಗಿದೆ.
ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಿಂದ ಈ ತೀರ್ಪು ಹೊರಬಿದ್ದಿದೆ. ಡಿಕೆ ಶಿವಕುಮಾರ್ ಅವರ ಮೇಲಿದ್ದ ಇಡಿ 120 B ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ತೀರ್ಪು ನೀಡಲಾಗಿದೆ.