ಮಾ.10ರಂದು ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ
ಉಡುಪಿ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು ಈ ಬಗ್ಗೆ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಮಾ.10ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿ ಎಂಜಿಎಂ ಮೈದಾನದಲ್ಲಿ ನಡೆಯಲಿದೆ.
ಅಧಿಕಾರಕ್ಕೆ ಬಂದ ದಿನದಿಂದಲೂ ಗ್ಯಾರಂಟಿ ಯೋಜನೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರವು ಜತೆಗೆ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಪ್ರಾದೇಶಿಕ ಅಭಿವೃದ್ಧಿಯ ವಿಷಯಗಳಿಗೆ ಆದ್ಯತೆ ನೀಡಿದೆ. ಈ ಬೃಹತ್ ಸಮಾವೇಶದಲ್ಲಿ ಜನಪ್ರತಿನಿಧಿ ಗಳು, ಅಧಿಕಾರಿಗಳು ಉಪಸ್ಥಿತರಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.