ಹಸಿದವರಿಗೆ ಅನ್ನ ಹಾಕಲು ಆಗಾದ ಬಿಜೆಪಿ ಸರ್ಕಾರ ಇದ್ದರೆಷ್ಟು, ಹೋದರೆಷ್ಟು? ಸಿದ್ದರಾಮಯ್ಯ

ಬೆಂಗಳೂರು: ಬಡವರು, ವಲಸೆ ಕಾರ್ಮಿಕರಿಗೆ ಅನುಕೂಲವಾಗಲಿ ಅಂತ ಜಾರಿಗೆ ತರಲಾಗಿದ್ದ ಇಂದಿರಾ ಕ್ಯಾಂಟೀನ್ ನ್ನು ಮುಚ್ಚಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಹೇಳಿದ್ದಾರೆ.

ದುಡ್ಡಿಲ್ಲ, ಕೊರೋನಾ ಇದೆ ಅಂತ ಜನರ ಎದುರು ಅಸಹಾಯಕತೆ ತೋರುವ ಬದಲು ಅಧಿಕಾರ ಬಿಟ್ಟು ತೊಲಗಲಿ. ಹಸಿದವರಿಗೆ ಅನ್ನ ಹಾಕಲು ಆಗಾದ ಸರ್ಕಾರ ಇದ್ದರೆಷ್ಟು, ಹೋದರೆಷ್ಟು? ಎಂದಿದ್ದಾರೆ.

ಕುಸುಮಾ ನಾಮಪತ್ರ ಸಲ್ಲಿಸುವ ದಿನ ತಾನು 11.45 ಕ್ಕೆ ನಾಮಪತ್ರ ಸ್ವೀಕರಿಸುವ ಕಚೇರಿಗೆ ಹೋಗಿದ್ದು, ನನ್ನ ವಿರುದ್ಧ 11.15 ಕ್ಕೆ ಕೇಸ್ ದಾಖಲಿಸಲಾಗಿದೆ. ಇದು ಪೊಲೀಸ್ ಇಲಾಖೆಯ ದುರ್ಬಳಕೆಯಲ್ಲದೆ ಇನ್ನೇನು? ಎಂದು ಪ್ರಶ್ನಿಸಿದ್ದು, ಇದು ಸಂಪೂರ್ಣ ರಾಜಕೀಯ ದುರುದ್ದೇಶದಿಂದ ಕೂಡಿದ ಆರೋಪ. ಇಂಥಾ ಗೊಡ್ಡು ಬೆದರಿಕೆಗಳಿಗೆಲ್ಲ ಹೆದರಲ್ಲ ಎಂದು ಗುಡುಗಿದ್ದಾರೆ.

ಶಿರಾದಲ್ಲಿ ಬಿಜೆಪಿಯವರು ಸಾವಿರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿರುವುದು ಕೋವಿಡ್ ನಿಯಮಗಳಿಗೆ ವಿರುದ್ಧವಲ್ಲವೇ? ತಾವು ಜಾರಿಗೆ ತಂದಿರುವ ನಿಯಮಗಳನ್ನು ತಾವೇ ಧಿಕ್ಕರಿಸಿದ್ದಾರೆ, ಇನ್ನು ಬೇರೆಯವರಿಗೆ ಉಪದೇಶ ನೀಡಲು ಯಾವ ನೈತಿಕತೆ ಇದೆ? ಎಂದು ಅವರು ಪ್ರಶ್ನಿಸಿದ್ದು, ಆರೋಗ್ಯ ಸಚಿವರು ಆಗಾಗ ತಮ್ಮ‌ ಪಕ್ಷದ ಸಭೆ ಸಮಾರಂಭಗಳನ್ನೂ ಗಮನಿಸಲಿ ಎಂದು ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!