ಮಂಗಳೂರು: ಮೆಡಿಕಲ್‌ ರೆಪ್‌ ನೇಣಿಗೆ ಶರಣು

ಮಂಗಳೂರು, ಮಾ.09 : ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಠಡಿಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ.

ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8 ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!