ನಾಳೆಯೊಳಗೆ(ಮಾ.12) ಚುನಾವಣಾ ಬಾಂಡ್ ವಿವರವನ್ನು ಸಲ್ಲಿಸಿ: ಎಸ್ಬಿಐಗೆ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ತನ್ನ ಆದೇಶವನ್ನು ಪಾಲಿಸದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಚುನಾವಣಾ ಬಾಂಡ್ ದಾನಿಗಳ ವಿವರಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿ) ಬಹಿರಂಗಪಡಿಸಲು ವಿಳಂಬ ಮಾಡಿದ್ದಕ್ಕಾಗಿ ಅಸಮಾಧಾನ ಹೊರ ಹಾಕಿದೆ.
ಪ್ರಕರಣದ ವಿಚಾರಣೆ ನಡೆಸಿರುವ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು, ನಾಳೆಯೊಳಗೆ (ಮಾ.12) ಚುನಾವಣಾ ಬಾಂಡ್ ವಿವರಗಳನ್ನು ಸಲ್ಲಿಸುವಂತೆ ಆದೇಶಿಸಿದೆ.