ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ನಿಷೇಧ: ಗೋಬಿ ಮಂಚೂರಿಗೆ ಕೃತಕ ಬಣ್ಣ ಬಳಸಿದ್ರೆ ಕಾನೂನು ಕ್ರಮ- ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ ಮಾದರಿಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಸೂಚಿಸಿದ್ದಾರೆ.

ಕನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ.

ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆಯಲ್ಲಿ ಕಾಟನ್ ಕ್ಯಾಂಡಿ ಬ್ಯಾನ್ ಆಗಿದೆ, ಗೋಬಿಯಲ್ಲಿ ಕೃತಕ ಬಣ್ಣ ಬಳಸಿದರೇ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಗೋಬಿ ಮಂಚೂರಿ ಸಸ್ಯಾಹಾರಿ ಪದಾರ್ಥ, ಹೀಗಾಗಿ ನಿಷೇಧ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕೃತಕ ಬಣ್ಣ ಬಳಸದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್‌ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್‌ ರಾಸಾಯನಿಕ ಅಂಶ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!