ಬಸ್ ಮೇಲೆ ಬಿದ್ದ ಹೈಟೆನ್ಷನ್ ವಿದ್ಯುತ್ ತಂತಿ- 10ಕ್ಕೂ ಹೆಚ್ಚು ಮಂದಿ ಸಜೀವ ದಹನ!
ಲಕ್ನೋ, ಮಾ 11:ಮದುವೆಗೆ ತೆರಳುತ್ತಿದ್ದ ಬಸ್ ಮೇಲೆ 11,000 ವೋಲ್ಟ್ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಬಸ್ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 36 ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ವಿದ್ಯುತ್ ತಂತಿ ತಗುಲಿದ ವೇಳೆ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಆಗಿದೆ ಇದೆ ವೇಳೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಇಡೀ ಬಸ್ಸು ಸುಟ್ಟು ಕರಕಲಾಗಿದೆ ಈ ವೇಳೆ ಬಸ್ಸಿನಿಂದ ಹೊರಬರಲಾಗದೆ ಹತ್ತು ಪ್ರಯಾಣಿಕರು ಸಜೀವ ದಹನಗೊಂಡಿದ್ದರೆ ಅಲ್ಲದೆ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.