5, 8, 9, 11 ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಈಗಾಗಲೇ ಆರಂಭವಾಗಿರುವ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಿದೆ.
5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದ್ದ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪರೀಕ್ಷೆಗಳನ್ನು ನಡೆಸದಂತೆ ತಡೆ ನೀಡಿದೆ.
ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ಮುಂದೂಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.