ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು
ಗದಗ: ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಎಂದು ತಿಳಿದುಬಂದಿದೆ.
ಕೊಲೆಗೂ ಮುನ್ನ ಶರಣಪ್ಪ ಸಂದಿಗೌಡ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಕಣ್ಣಿಗೆ ಖಾರದ ಪುಡಿ ಎರಚಿ ಕೊಲೆ ಮಾಡಿ ನಂತರ ಮರಕ್ಕೆ ನೇತು ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಡರಗಿ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಕುಸುಗಲ್ಲ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರನ ಹತ್ಯೆ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದೆ.