ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಂದ ಧ್ವಜವನ್ನು ಸ್ವೀಕರಿಸಿ ಪಕ್ಷಕ್ಕೆ ಮರು ಸೇರ್ಪಡೆಗೊಂಡರು.
ಇದೇ ವೇಳೆ ಬೈಂದೂರಿನ ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ ಹಾಗೂ ಮೂಡಿಗೆರೆಯ ಮಾಜಿ ಶಾಸಕ ಎಮ್ ಪಿ ಕುಮಾರಸ್ವಾಮಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಸೇರ್ಪಡೆ ಕಾರ್ಯಕ್ರಮದಲ್ಲಿ ಹಿರಿಯ ಸಚಿವರಾದ ಡಾಜಿ ಪರಮೇಶ್ವರ, ಕೆ ಜೆ ಜಾರ್ಜ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಂಡಿದ್ದರು.
Otakke ellada uppina Kai