ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಬೆಂಬಲಿಗರ ತೀರ್ಮಾನದಂತೆ ಮುಂದುವರೆಯುವೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: “ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಕೊಡಿಸುವೆ. ಅಲ್ಲಿ ಓಡಾಡಿ ಗೆಲ್ಲಿಸಿಕೊಂಡು ಬರುವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಭರವಸೆ ಕೊಟ್ಟ ಕಾರಣಕ್ಕೆ ಪುತ್ರ ಕಾಂತೇಶನನ್ನು ಅಲ್ಲಿಗೆ ಕಳುಹಿಸಿದ್ದೆ. ಈಗಲೂ ಹಾವೇರಿಯಿಂದ ಪುತ್ರನಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಒಂದೊಮ್ಮೆಅಗತ್ಯ ಬಿದ್ದರೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವೆ” ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಪುತ್ರನಿಗೆ ಟಿಕೆಟ್ ಸಿಗದೇ ಇದ್ದಲ್ಲಿ ಶುಕ್ರವಾರ ಶಿವಮೊಗ್ಗದ ಬಂಜಾರ ಭವನದಲ್ಲಿ ಬೆಂಬಲಿಗರು ಸಭೆ ಕರೆದಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಮುಂದುವರೆಯುವೆ ಎಂದು ಹೇಳಿದರು.

ಹಾವೇರಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುವುದಿಲ್ಲ. ಬೆಂಬಲಿಗರ ಒತ್ತಾಯವೂ ಇರುವುದರಿಂದ ಅಗತ್ಯ ಬಿದ್ದರೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ತಿಳಿಸಿದರು.

ಪುತ್ರನಿಗೆ ಟಿಕೆಟ್ ಪಡೆಯುವುದರ ಹಿಂದೆ ಬರೀ ನನ್ನ ರಾಜಕೀಯ ಭವಿಷ್ಯ ಅಡಗಿಲ್ಲ. ಬದಲಿಗೆ ಬಿಜೆಪಿಯ ಭವಿಷ್ಯ ಅಡಗಿದೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸುವ ಕೆಲಸವೂ ಇದರ ಹಿಂದೆ ಇದೆ ಎಂದರು.

Leave a Reply

Your email address will not be published. Required fields are marked *

error: Content is protected !!