ಉದ್ಯಾವರ: ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಕಾರ್ಯಕ್ರಮ
ಉದ್ಯಾವರ: ಬಿಜೆಪಿ ಮಹಾ ಶಕ್ತಿ ಕೇಂದ್ರ ಉದ್ಯಾವರ ವತಿಯಿಂದ ಉದ್ಯಾವರ ಸೌಂದರ್ಯ ಸಭಾಭವನದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಜಿತೇಂದ್ರ ಶೆಟ್ಟಿ ಅವರನ್ನು ಉದ್ಯಾವರ ಮಹಾಶಕ್ತಿ ಕೇಂದ್ರದ ವತಿಯಿಂದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ವಕ್ತಾರರಾದ ವಿಜಯ್ ಕುಮಾರ್ ಉದ್ಯಾವರ, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಸಂದೀಪ್ ಕಲ್ಯಾ, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾರ್ಯದರ್ಶಿಗಳಾದ ರಾಜೇಶ್ ಕುಂದರ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಸಚಿನ್ ಸಾಲ್ಯಾನ್, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ, ಉದ್ಯಾವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿ ಕೋಟ್ಯಾನ್ ಉಪಸ್ಥಿತರಿದ್ದರು.