ವಾರಾಹಿ ಪೈಪ್ ಲೈನ್ ಅಳವಡಿಕೆಗೆ ಅರಣ್ಯ ಇಲಾಖೆ ಒಪ್ಪಿಗೆ: ಯಶ್ಪಾಲ್ ಸುವರ್ಣ
ಉಡುಪಿ ನಗರಕ್ಕೆ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ವಾರಾಹಿ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ಅರಣ್ಯ ಇಲಾಖೆಯಿಂದ ತಾಂತ್ರಿಕ ಅನುಮತಿ ನೀಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ, ಉಡುಪಿ ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಯಾಗಿರುವ ವಾರಾಹಿ ಯೋಜನೆಯ ಪೈಪ್ ಲೈನ್ ಅಳವಡಿಕೆಗೆ ತಕ್ಷಣ ಅನುಮತಿ ನೀಡುವಂತೆ ಕೋರಿದರು. ಈ ಯೋಜನೆಯಿಂದ ಉಡುಪಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಲಿದೆ ಎಂದರು.
ಶಾಸಕರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಮ್ಮತಿ ಸೂಚಿಸಿ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.