ಕೊನೆಗೂ ಬಿಜೆಪಿ ಸೇರ್ಪಡೆಯಾದ ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಹಿಂದೂ ಸಂಘಟನೆಯ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಪಕ್ಷಕ್ಕೆ ಬರಮಾಡಿಕೊಂಡರು.
ಬೆಂಗಳೂರುನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿವಾಸದಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು ಪುತ್ತಿಲ ಅವರಿಗೆ ಹೂಗುಚ್ಚ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.