ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು (ಇಸಿಐ) ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ದಿನಾಂಕವನ್ನು ನಾಳೆ (ಮಾ.16) ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಿದೆ.
ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನೂ ಆಯೋಗವು ಪ್ರಕಟಿಸಲಿದೆ.