ಉಡುಪಿ: ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಲಕ್ಷ್ಮಣ ಕಾಂಚನ್ ನಿಧನ
ಉಡುಪಿ: ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಲಕ್ಷ್ಮಣ ಕಾಂಚನ್, ಬಾರ್ಕೂರು (70) ಇವರು ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಹಲವು ಸಮಯಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಮೃತರಾಗಿದ್ದಾರೆ.
ವಿವಿಧ ಮೇಳಗಳಲ್ಲಿ ನಾಲ್ಕು ದಶಕಗಳಿಗೂ ಮಿಕ್ಕಿ ಸೇವೆ ಸಲ್ಲಿಸಿದ ಇವರನ್ನು ಮೂರು ವರ್ಷಗಳ ಹಿಂದೆ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಇವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾಂಚನರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.