ಲೋಕಸಭಾ ಚುನಾವಣೆ: ದಿನಾಂಕ ಪ್ರಕಟ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಚುನಾವಣಾ ದಿನಾಂಕ ಪ್ರಕಟಿಸಿದೆ. ದೇಶದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಏಪ್ರಿಲ್‌ 19ರಂದು ಮೊದಲ ಹಂತದ ಮತದಾನ. ಏಪ್ರಿಲ್‌ 26 ಮತ್ತು ಮೇ 7ರಂದು ಕರ್ನಾಟಕದಲ್ಲಿ  ಮತದಾನ, ಮೇ 7ರಂದು ಮೂರನೇ ಹಂತ, ಮೇ 13 4ನೇ ಹಂತದ ಮತದಾನ, ಮೇ 20 5ನೇ ಹಂತ, ಮೇ 25 6ನೇ ಹಂತ, ಜೂನ್‌ 1 7ನೇ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಘೋಷಣೆ.

ದೇಶದಲ್ಲಿ 97 ಕೋಟಿ ಮತದಾರರು ಇದ್ದು, ಇದರಲ್ಲಿ 47.10 ಕೋಟಿ ಮಹಿಳಾ ಮತದಾರರು ಇದ್ದಾರೆ. 12 ರಾಜ್ಯದಲ್ಲಿ ಮಹಿಳಾ ಮತದಾರರೆ ಹೆಚ್ಚು.

85 ವರ್ಷ ಮೀರಿದ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ.

1.8 ಕೋಟಿ ಹೊಸ ಮತದಾರರ ಸೇರ್ಪಡೆ,

10.5 ಲಕ್ಷ ಮತಗಟ್ಟೆ, 55 ಲಕ್ಷ ಇವಿಎಂ ಬಳಕೆ

1.5 ಕೋಟಿ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿಯಿಂದ ಕಾರ್ಯನಿರ್ವಹಣೆ

ಹಣ ಹಂಚುವುದು, ಆಮಿಷ ಒಡ್ಡಿದರೆ ದೂರು ನೀಡಲು ಅವಕಾಶ

ಅಕ್ರಮಗಳ ಬಗ್ಗೆ ಪೋಟೋ ಸಹಿತ ದೂರು ನೀಡಿ, ಗಡಿ ಭಾಗಗಳಲ್ಲಿ ಡ್ರೋನ್ ಕಣ್ಗಾವಲು

ಸೂರ್ಯಾಸ್ತದ ಬಳಿಕ ಬ್ಯಾಂಕ್‌ಗಳ ಹಣದ ವಾಹನ ಸಂಚರಿಸುವುಂತಿಲ್ಲ. ಆನ್ಲೈನ್ ವಹಿವಾಟಿನ ಮೇಲೆ ನಿಗಾ

ದೇಶದಲ್ಲಿ 543 ಕ್ಷೇತ್ರ – 7 ಹಂತದಲ್ಲಿ ಚುನಾವಣೆ, ಜೂನ್ 4 ಮತ ಎಣಿಕೆ

ಕೇಂದ್ರ ಚುನಾವಣಾ ಆಯೋಗ, ಇಡೀ ದೇಶವೇ ತೀವ್ರ ಕೂತುಹಲದಿಂದ ಕಾಯುತ್ತಿದ್ದ 2024ರ ಲೋಕಸಭೆ ಚುನಾವಣೆಗೆ ಶನಿವಾರ ಮೂಹುರ್ತ ಫಿಕ್ಸ್ ಮಾಡಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಮತ್ತು ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು ದೆಹಲಿಯ ವಿಜ್ಞಾನಭವನದಲ್ಲಿ ಹೊಸದಾಗಿ ನೇಮಕಗೊಂಡ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ನಾವು ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಭ್ಯರ್ಥಿಗಳನ್ನು ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ ಎಂದು ಹೇಳಿದರು.

ಕರ್ನಾಟಕದಲ್ಲಿ ಎರಡು ಹಂತದ ಮತದಾನ ಮೊದಲ ಹಂತ ಏಪ್ರಿಲ್ 26 ಮತ್ತು ಎರಡನೇ ಮೇ 7 ಕ್ಕೆ ಚುನಾವಣೆ.

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ

ಏಪ್ರಿಲ್ 26 ರಂದು ರಾಜ್ಯದ ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರದಲ್ಲಿ ಮತದಾನ ನಡೆಯಲಿದೆ.

ಮೇ 7 ರಂದು ಎರಡನೇ ಹಂತದಲ್ಲಿ ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್​, ಹುಬ್ಬಳಿ-ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರದಲ್ಲಿ ಮೇ 7 ರಂದು ಚುನಾವಣೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!