ಐಎಂಎ ವಂಚನೆ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್
ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ.
ಸಿಐಡಿ ಡಿವೈಎಸ್‌ಪಿ ಆಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ರಮೇಶ್, ಪಿಎಸ್‌ಐ ಗೌರಿಶಂಕರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಎಂಎ ಬಹುಕೋಟಿ ವಂಚನೆ ಕೇಸ್ ಸಂಬಂಧ 28 ಆರೋಪಿಗಳ ವಿರುದ್ಧ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಅಮಾನತುಗೊಂಡ ಅಧಿಕಾರಿಗಳು ಐಎಂಎ ವಂಚನೆ ಪ್ರಕರಣದ ಬಗ್ಗೆ ಸಮರ್ಪಕವಾಗಿ ತನಿಖೆ ಮಾಡಿಲ್ಲ. ವಂಚನೆ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂಬ ಆರೋಪ ಇದೆ.