ಕಾಂಗ್ರೆಸ್ ಪಕ್ಷ ಸೇರುವ ಸುದ್ದಿಯ ಕುರಿತು ಸ್ಪಷ್ಟನೆ ನೀಡಿದ ಡಿ.ವಿ ಸದಾನಂದ ಗೌಡ
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರ ಕೈ ತಪ್ಪಿದ್ದು ಈ ಕುರಿತು ತಮ್ಮ ವಿರುದ್ಧ ಹರಿದಾಡುತ್ತಿರುವ ಗಾಳಿ ಸುದ್ದಿಗಳಿಗೆ ಸ್ವತಃ ಡಿ ವಿ ಸದಾನಂದ ಗೌಡ ಅವರೇ ತಮ್ಮ ಎಕ್ಸ್ ಖಾತೆಯ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಲೋಕಸಭಾ ಚುನಾವಣೆಯ ಟಿಕೆಟ್ ಸದಾನಂದ ಗೌಡ ಅವರ ಕೈತಪ್ಪಿದ ಬೆನ್ನಲ್ಲೇ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಗಾಳಿ ಸುದ್ದಿಯು ಸೋಶಿಯಲ್ ಮೀಡಿಯಾದಲ್ಲಿ ಬಾರಿ ಹರಿದಾಡಿತ್ತು. ಆದರೆ ಈ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.
All major posts enjoyed in bjp now intend to go unwanted party in India