ಕಾಂಗ್ರೆಸ್ ಸೇರ್ಪಡೆಯಾದ ಬಿಎಸ್ಪಿ ಸಂಸದ ಡ್ಯಾನಿಷ್ ಅಲಿ
ಹೊಸದಿಲ್ಲಿ:ಉತ್ತರಪ್ರದೇಶದ ಬಿಎಸ್ ಪಿ ಸಂಸದ ಡ್ಯಾನಿಷ್ ಅಲಿ ಅವರು ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಜಾತ್ಯತೀತ ಜನತಾ ದಳದಿಂದ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2019 ಮಾರ್ಚ್ ನಲ್ಲಿ ಎಚ್.ಡಿ ಕುಮಾರಸ್ವಾಮಿ ಅವರ ಒಪ್ಪಿಗೆಯೊಂದಿಗೆ ಬಹುಜನ ಸಮಾಜ ಪಕ್ಷಕ್ಕೆ ಸೇರಿದ್ದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಅಮ್ರೋಹಾ ಕ್ಷೇತ್ರದಿಂದ ಸ್ಪರ್ಧಿಸಿ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಕನ್ವರ್ ಸಿಂಗ್ ತನ್ವಾರ್ ಅವರನ್ನು 63,000 ಮತಗಳ ಅಂತರದಿಂದ ಸೋಲಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು. 2023 ಡಿಸೆಂಬರ್ ನಲ್ಲಿ ಬಿಜೆಪಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಅಮ್ರೋಹಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿಯಲಿದ್ದಾರೆ.