ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ- ಪದಗ್ರಹಣ ಸಮಾರಂಭ ಹಾಗೂ ಮಹಿಳಾ ದಿನಾಚರಣೆ

ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಭಾನುವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾ ವಾಗ್ಲೆ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಹಿಳೆಯರಿಗಾಗಿ ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನು ಏರ್ಪಾಡಿಸಲಾಗಿತ್ತು. ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಗೇರು ನಿಗಮದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಮತಾ ಗಟ್ಟಿ ಅವರನ್ನು ಸನ್ಮಾನಿಸಲಾಯಿತು.ಬಳಿಕ ಮಾತನಾಡಿದ ಅವರು ಮಹಿಳಾ ದಿನಾಚರಣೆಯ ಶುಭಾಶಯವನ್ನು ತಿಳಿಸಿ ಕರ್ನಾಟಕ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ ಬದ್ದವಾಗಿದ್ದು ಗ್ಯಾರಂಟಿ ಯೋಜನೆ ಗಳಿಂದ ಮಹಿಳೆಯರಿಗೆ ಉತ್ತಮ ಜೀವನ ನಡೆಸಲು ಸಹಕಾರಿಯಾಗಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಅರ್ಹತೆಯನ್ನು ಹೊಂದಿದ್ದಾರೆ ಹಾಗೂ ಪುರುಷರಗಿಂತ‌ ಕಡಿಮೆ ಇಲ್ಲಾ‌ ಎಂದು ತೋರಿಸಿಕೊಟ್ಟಿದ್ದಾರೆ.

ಬಳಿಕ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕೆ.ಪಿ.ಸಿ.ಸಿ ಸಂಯೋಜಕರು, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಪ್ರತಿಭಾ ಕುಳಾಯಿ ಅವರು ಭಾಗವಹಿಸಿ ಮಹಿಳೆಯರಿಗಾಗಿ ಸ್ಪೂರ್ತಿದಾಯಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ನಾಯಕರಾದ ಪ್ರಸಾದ್‌ರಾಜ್ ಕಾಂಚನ್, ರಮೇಶ್ ಕಾಂಚನ್, ಜ್ಯೋತಿ ಹೆಬ್ಬಾರ್, ಅಮೃತಾ ಕೃಷ್ಣಮೂರ್ತಿ, ಮಹಿಳಾ ಕಾಂಗ್ರೆಸ್ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು‌.

ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಮಮತಾ ಶೆಟ್ಟಿ ಸ್ವಾಗತಿಸಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಮಾರ್ ಮಂಚಿ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಕ್ತಾರರಾದ ಸತೀಶ್ ಕೊಡವೂರು ಅವರು ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿ ಹೆಬ್ಬಾರ್ ಅವರು ಕಾರ್ಯಕ್ರಮ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!