ಬಿಜೆಪಿಯ 3ನೇ ಪಟ್ಟಿ ಬಿಡುಗಡೆ- ಕೆ.ಅಣ್ಣಾ ಮಲೈ, ತಮಿಳಿಸೈ ಸೌಂದರರಾಜನ್ ಸ್ಪರ್ಧೆ

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಬಿಜೆಪಿಯು 9 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಂಬತ್ತೂರಿನಿಂದ, ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದ ತಮಿಳಿಸೈ ಸೌಂದರರಾಜನ್ ಅವರು ಚೆನ್ನೈ ದಕ್ಷಿಣದಿಂದ ಸ್ಪರ್ಧಿಸಲಿದ್ದಾರೆ.

ತಮಿಳುನಾಡಿನಲ್ಲಿ ಬಿಜೆಪಿ ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಹರಸಾಹಸ ನಡೆಸುತ್ತಿದ್ದು, ಆಡಳಿತಾರೂಢ ಡಿಎಂಕೆ ಮೈತ್ರಿಕೂಟ ಮತ್ತು ಎಐಡಿಎಂಕೆ ಮೈತ್ರಿಕೂಟಕ್ಕೆ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸವಾಲು ಒಡ್ಡುತ್ತಿದೆ. ನೀಲಗಿರಿಯಿಂದ ಕೇಂದ್ರ ಸಚಿವ ಎಲ್.ಮುರುಗನ್ ಸ್ಪರ್ಧಿಸಲಿದ್ದಾರೆ. ಕನ್ಯಾಕುಮಾರಿಯಿಂದ ಕೇಂದ್ರದ ಮಾಜಿ ಸಚಿವ ಪೊನ್ ರಾಧಾಕೃಷ್ಣನ್ ಅವರು ಸ್ಪರ್ಧಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!