ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕನ್ನಡದ ಖ್ಯಾತ ಚಲನಚಿತ್ರ ನಟ ಶಿವರಾಜ್‌ ಕುಮಾರ್ ಅವರು ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವುದರಿಂದ ಅವರು ಅಭಿನಯಿಸಿರುವ ಚಿತ್ರಗಳು ಮತ್ತು ಅವರು ಇರುವ ಜಾಹಿರಾತುಗಳ ಮೇಲೆ ನಿರ್ಬಂಧ ವಿಧಿಸ ಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ.

ನಟ ಶಿವರಾಜ್ ಕುಮಾರ್ ಅವರು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಪರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಆದ್ದರಿಂದ ಅವರ ಸಿನಿಮಾ, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಬಿಜೆಪಿ ಮನವಿ ಮಾಡಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಪತ್ನಿಯ ಚುನಾವಣಾ ಪ್ರಚಾರಕ್ಕೆ ನಟ ಶಿವರಾಜ್ ಕುಮಾರ್ ಕೂಡ ಸಾಥ್ ನೀಡಿದ್ದರು.

1 thought on “ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Leave a Reply

Your email address will not be published. Required fields are marked *

error: Content is protected !!