ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆ- ಮದ್ಯ ಮಾರಾಟ ನಿಷೇಧ

ಉಡುಪಿ, ಮಾ.22(ಉಡುಪಿ ಟೈಮ್ಸ್ ವರದಿ): ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಜಿಲ್ಲೆಯಲ್ಲಿ ಏಪ್ರಿಲ್ 26 ರಂದು ಮತದಾನ ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಸಲು ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.

ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ135(ಸಿ) ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಏಪ್ರಿಲ್ 24 ರ ಸಂಜೆ 5 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12 ರವರೆಗೆ ಹಾಗೂ ಜೂನ್ 3ರಂದು ಮಧ್ಯರಾತ್ರಿ 12ಗಂಟೆಯಿಂದ ಜೂ.4ರ ಮಧ್ಯರಾತ್ರಿ 12 ರ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು. ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಹಾಗೂ ಕ್ಲಬ್‌ಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!