ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ನೇಮಕಗೊಳಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಡಾ.ಎಲ್ ಹನುಮಂತಯ್ಯ ಅವರನ್ನು ಸಹ ಅಧ್ಯಕ್ಷರಾಗಿ ಮತ್ತು ರಿಝ್ಜನ್ ಅರ್ಷದ್ ಅವರನ್ನು ಉಪಾಧ್ಯಕ್ಷರಾಗಿ ನೇಮಕಗೊಳಿಸಲಾಗಿದೆ.
ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಶಾಸಕ ತನ್ವಿರ್ ಸೇಟ್, ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್, ಶಾಸಕ ವಿನಯ್ ಕುಲಕರ್ಣಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್ ರಾಯಚೂರು ಅವರನ್ನು ನೇಮಕಗೊಳಿಸಲಾಗಿದೆ.