ಬಿಜೆಪಿಯಿಂದ ಕಂಗನಾ ರಣಾವತ್‌ಗೆ ಟಿಕೆಟ್: ವರುಣ್ ಗಾಂಧಿಗೆ ತಪ್ಪಿದ ಟಿಕೆಟ್

ಹೊಸದಿಲ್ಲಿ: ಬಿಜೆಪಿ ಲೋಕಸಭಾ ಚುನಾವಣೆಗೆ ಭಾನುವಾರ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದೆ.

ಇಂದು ಬಿಜೆಪಿ ಸೇರಿದ ಕೈಗಾರಿಕೋದ್ಯಮಿ ಮತ್ತು ಕಾಂಗ್ರೆಸ್ ಮಾಜಿ ಸಂಸದ ನವೀನ್ ಜಿಂದಾಲ್ ಅವರನ್ನು ಹರಿಯಾಣದ ಕುರುಕ್ಷೇತ್ರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಉತ್ತರ ಪ್ರದೇಶದ ಪಿಲಿಭಿತ್‌ನಿಂದ ವರುಣ್ ಗಾಂಧಿಯನ್ನು ಕೈಬಿಟ್ಟು ಮಾಜಿ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ್ ಅವರಿಗೆ ಟಿಕೆಟ್ ನೀಡಿದೆ. ವರುಣ್ ಅವರ ತಾಯಿ ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರನ್ನು ಸುಲ್ತಾನ್‌ಪುರದಿಂದ ಕಣಕ್ಕಿಳಿಸುತ್ತಿದೆ.

ಪಕ್ಷವು ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಅಭಿಜಿತ್ ಗಂಗೂಲಿ ಅವರಿಗೆ ತಮ್ಲುಕ್‌ನಿಂದ ಲೋಕಸಭೆ ಟಿಕೆಟ್ ನೀಡಿದೆ.ದಕ್ಷಿಣ ಗೋವಾದಿಂದ ಅಚ್ಚರಿ ಅಭ್ಯರ್ಥಿಯಾಗಿ ಡೆಂಪೋ ಇಂಡಸ್ಟ್ರೀಸ್ ನಿರ್ದೇಶಕಿ ಪಲ್ಲವಿ ಶ್ರೀನಿವಾಸ್ ಡೆಂಪೋ ಅವರಿಗೆ ಟಿಕೆಟ್ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!