ಪ್ರಧಾನಿ ಮೋದಿ ಭಾಷಣ: ಎಲ್ಲಿಯವರೆಗೂ ಮದ್ದಿಲ್ಲ, ಅಲ್ಲಿಯವರೆಗೂ ಕೊರೊನಾ ಬಗ್ಗೆ ಮೈಮರೆಯಬೇಡಿ

ನವದೆಹಲಿ: ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ಸಂತಸದ ವಿಷಯವನ್ನ ಹಂಚಿಕೊಂಡರು.

ಕಬೀರರ ವಚನ ಉಲ್ಲೇಖಿಸಿದ ಮೋದಿ ‘ನಾವು ಫಸಲು ನೋಡಿ ಕೆಲಸ ಮುಗೀತು ಅಂತ ಖುಷಿ ಪಡ್ತೀವಿ. ಆದರೆ ಫಸಲು ಮನೆಗೆ ಬರುವವರೆಗೆ ಕೆಲಸ ನಿಲ್ಲಸಬಾರದು, ಕೊರೊನಾ ವಿಚಾರದಲ್ಲಿಯೂ ಇದು ನಿಜ. ಮಹಾಮಾರಿಗೆ ಲಸಿಕೆ ಬರುವವರೆಗೆ ನಾವು ನಮ್ಮ ಹೋರಾಟ ನಿಲ್ಲಿಸಬಾರದು.

ಜನತಾ ಕರ್ಫ್ಯೂ ಬಳಿಕ ಇಂದಿನವರೆಗೆ ಹಲವು ಸಂಕಷ್ಟಗಳನ್ನು ಎದುರಿಸಿದ್ದೇವೆ. ಕೊರೊನಾ ನಡುವೆ ಜೀವನ ನಿರ್ವಹಣೆಗಾಗಿ ಜನರು ಮನೆಯಿಂದ ಹೊರ ಬರುತ್ತಿದ್ದಾರೆ. ಲಾಕ್‍ಡೌನ್ ತೆರವು ಆಗಿರಬಹುದು. ಆದ್ರೆ ವೈರಸ್ ಹೋಗಿಲ್ಲ. ಕಳೆದ ಎಂಟು ದಿನಗಳಿಂದ ಕಾಪಾಡಿಕೊಂಡ ಸ್ಥಿತಿಯನ್ನ ಮುಂದೆ ಹಾಳು ಮಾಡಿಕೊಳ್ಳಬಾರದು. ಭಾರತದಲ್ಲಿ ಕೊರೊನಾ ಗುಣಮುಖ ಪ್ರಮಾಣ ಶೇ.83ರಷ್ಟಿದೆ. ಅಭಿವೃದ್ಧಿ ರಾಷ್ಟ್ರಗಳಲ್ಲಿ ಕೊರೊನಾ ಮರಣ ಪ್ರಮಾಣ ಹೆಚ್ಚಿದ್ದು, ನಮ್ಮಲ್ಲಿ ಕಡಿಮೆ ಇದೆ.

ದೇಶದ 2 ಸಾವಿರ ಲ್ಯಾಬ್ ಗಳಲ್ಲಿ ಕೊರೊನಾ ಟೆಸ್ಟ್ ಮಾಡಲಾಗ್ತಿದೆ. 90 ಲಕ್ಷದಷ್ಟು ಬೆಡ್ ಗಳ ವ್ಯವಸ್ಥೆ ದೇಶದಲ್ಲಿದೆ. ಭಾರತದಲ್ಲಿ ನಾಗರೀಕರ ಜೀವ ಉಳಿಸುವಲ್ಲಿ ಸರ್ಕಾರ ಸಫಲವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಬೇಜಾವಾಬ್ದಾರಿತನ ತೋರಿಸಬಾರದು. ನಿರ್ಲಕ್ಷ್ಯ ನಿಮ್ಮನ್ನು ಅಪಾಯಕ್ಕೆ ದೂಡಬಹುದು. ಭಾರತದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಲಾಗ್ತಿದೆ.

ಪೂರ್ಣ ಪ್ರಮಾಣದಲ್ಲಿ ಸಫಲತೆ ಸಿಗದೇ ಖುಷಿ ಪಡೋದು ಸರಿಯಲ್ಲ. ಕೆಲಸ ಪೂರ್ಣವಾಗದೇ ಸಂತೋಷಪಡೋದು ಒಳ್ಳೆಯದಲ್ಲ. ಕೊರೊನಾಗೆ ವ್ಯಾಕ್ಸಿನ್ ಸಿಗೋವರೆಗೂ ಎಲ್ಲ ನಿಯಮಗಳನ್ನ ಪಾಲಿಸಬೇಕು. ವಿದೇಶಗಳು ಸೇರಿದಂತೆ ದೇಶದಲ್ಲಿ ಕೊರೊನಾ ವ್ಯಾಕ್ಸಿನ್ ಗಾಗಿ ಸಂಶೋಧನೆಗಳು ನಡೆಯುತ್ತಿವೆ. ವ್ಯಾಕ್ಸಿನ್ ಸಿದ್ಧವಾದ ಕೂಡಲೇ ಅದನ್ನ ಪ್ರತಿ ದೇಶವಾಸಿಗೆ ಹೇಗೆ ತಲುಪಿಸಬೇಕು ಎಂಬುದರ ಬಗ್ಗೆ ಸರ್ಕಾರ ಕೆಲಸ ಮಾಡುತ್ತಿದೆ.

ಸದ್ಯ ಸಾಲು ಸಾಲು ಹಬ್ಬಗಳು ಬಂದಿದೆ. ಈ ಸಮಯದಲ್ಲಿ ಅತ್ಯಂತ ಎಚ್ಚರಿಕೆಯಿಂದ ಹಬ್ಬಗಳನ್ನು ಆಚರಿಸಿ. ಈ ಹಬ್ಬಗಳು ನಿಮ್ಮಲ್ಲಿ ಉತ್ಸಾಹ ಮತ್ತು ಸಂತೋಷವನ್ನ ತರಲಿ ಎಂದು ಆಶಿಸುತ್ತೇನೆ. ಹಾಗಾಗಿ ಮಾಸ್ಕ್ ಧರಿಸುವಿಕೆ ಸೇರಿದಂತೆ ಎಲ್ಲ ಕೊರೊನಾ ನಿಯಮಗಳನ್ನ ಪಾಲಿಸಿ ಎಂದು ಆಗ್ರಹಿಸುತ್ತೇನೆ. ಕೊರೊನಾ ತಡೆಯುವಲ್ಲಿ ಸರ್ಕಾರ ನಡೆಸುತ್ತಿರುವ ಶ್ರಮಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದರು.

ದೇಶದ ಜನತೆಗೆ ದಸರಾ, ನವರಾತ್ರಿ, ಈದ್, ಗುರುನಾನಕ, ದೀಪಾವಳಿ ಹಬ್ಬದ ಶುಭಾಶಯ ಹೇಳಿದ ಪ್ರಧಾನಿ, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ ಜನತೆಗೆ ಸಲಹೆ ನೀಡಿದರು.

2 thoughts on “ಪ್ರಧಾನಿ ಮೋದಿ ಭಾಷಣ: ಎಲ್ಲಿಯವರೆಗೂ ಮದ್ದಿಲ್ಲ, ಅಲ್ಲಿಯವರೆಗೂ ಕೊರೊನಾ ಬಗ್ಗೆ ಮೈಮರೆಯಬೇಡಿ

  1. This is a way of keeping the people terrified about an ordinary virus whose infection rate is just 2. The so called vaccine prepared from bovine serum etc will lead to slaughter of lacs of cows; hurting religious sentiments of many and the gorakshaks(?). As such there cannot be vaccine for RNA virus! Then what’s this Vaccine? It is a poison to reduce population by inducing infertility and kill people by inducing cancer! Everyone do some homework to know the truth. WHO, whose slave our government is, is World Harassment Organization!!!!

  2. During this difficult time of sevier spreading of Covid 19, wearing mask, keeping the social distance, cleanliness is very important to prevent the situation. All citizens should follow the instructions of the government without hesitation. God bless all of us.

Leave a Reply

Your email address will not be published. Required fields are marked *

error: Content is protected !!