ಉಡುಪಿ: ಮಾದರಿ ನೀತಿ ಸಂಹಿತೆ ಉಲ್ಲಂಘನೆ- ಪ್ರಕರಣ ದಾಖಲು

ಉಡುಪಿ, ಮಾ.26: ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಎಸ್ ತಂಡದ ವತಿಯಿಂದ 7500 ರೂ ಮೌಲ್ಯದ 100 ಲೀ. ಶೇಂದಿ ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಉಡುಪಿ ಸೆನ್ ಪೊಲೀಸರು 44,000 ರೂ. ಮೌಲ್ಯದ 1.108 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಅದೇ ರೀತಿ 1440 ರೂ. ಮೌಲ್ಯದ 3.240 ಲೀ ಮದ್ಯ ವಶಪಡಿಸಿಕೊಂಡಿದ್ದು, ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿರುತ್ತದೆ ಹಾಗೂ ಹೆಜಮಾಡಿ ಚೆಕ್‌ಪೋಸ್ಟ್ನಲ್ಲಿ ಎಸ್.ಎಸ್.ಟಿ ತಂಡವು 79,737 ರೂ. ಮೌಲ್ಯದ ಬಟ್ಟೆಗಳನ್ನು ವಶಪಡಿಸಿ ಕೊಂಡಿರುವುದಾಗಿ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!