ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಮುಖ ಪಾತ್ರವಹಿಸಿದ್ದೆ: ಜಯಪ್ರಕಾಶ್ ಹೆಗ್ಡೆ

ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆಯು ಬುಧವಾರ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಮನೋಜ್ ಕರ್ಕೇರ ಅವರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಿದರು.

ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆ ಅವರುಉಡುಪಿ ಜಿಲ್ಲೆಯಾಗಲು ಕಾರಣನಾಗಿದ್ದೇನೆ ಹಾಗೂ ಅಂದು ಉಡುಪಿ ಜಿಲ್ಲೆಯಾಗಿದ್ದರಿಂದ ಇಂದು ಉಡುಪಿ ಜಿಲ್ಲೆಯು ಇಷ್ಟು ಅಭಿವೃದ್ಧಿಯಾಗಲು ಸಹಕಾರಿಯಾಗಿ ದೆ. ಮೀನುಗಾರರಿಗೆ ಡಿಸೇಲ್ ಸಬ್ಸಿಡಿ ದೊರಕಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಅಡಿಕೆ ಬೆಳೆಗಾರರಿಗೆ ಗೋರಖ್‌ನಾಥ್ ಸಮಿತಿ ರಚಿಸಿ ಅಡಿಕೆ ಬೆಳೆಗೆ ಉತ್ತಮ ಬೆಲೆ ದೊರಕಲು ಶ್ರಮಿಸಿದ್ದೇನೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯತಂತ್ರ ರೂಪಿಸಲು ಹಾಗೂ ಕಾಂಗ್ರೆಸ್ ಪಕ್ಷದ ಗೆಲುವಿಗೆ ಪ್ರಮುಖ ಮಾಹಿತಿಯನ್ನು ಹಾಗೂ ಕಾಂಗ್ರೆಸ್ ಪಕ್ಷದ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಲು ಕರೆ ನೀಡಿದರು.

ಈ ಸಭೆಯಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ.ಎ ಗಫೂರ್, ಕೆ.ಪಿ.ಸಿ.ಸಿ ವಕ್ತಾರ ಸುಧೀರ್ ಕುಮಾರ್ ಮುರೋಳ್ಳಿ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾ ವಾಘ್ಲೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಾಯಕರಾದ ದಿನೇಶ್ ಪುತ್ರನ್, ಉಡುಪಿ ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ವೈ ಸುಕುಮಾರ್, ನಾಯಕರಾದ ಪ್ರಸಾದ್‌ರಾಜ್ ಕಾಂಚನ್, ಮುರಳಿ ಶೆಟ್ಟಿ, ದಿವಾಕರ್ ಕುಂದರ್, ದೀಪಕ್ ಕೋಟ್ಯಾನ್, ಕಿರಣ್ ಹೆಗ್ಡೆ, ಹರೀಶ್ ಕಿಣಿ, ಸೌರಭ್ ಬಲ್ಲಾಳ್, ಶೇಖ್ ವಾಹೀದ್, ಮಾರ್ಕ್ ಸಲ್ದಾಹ್ನ, ಮಮತಾ ಶೆಟ್ಟಿ, ಪ್ರಶಾಂತ್ ಪೂಜಾರಿ, ರೋಶನ್ ಶೆಟ್ಟಿ, ಗಣೇಶ್ ನೆರ್ಗಿ, ರವಿರಾಜ್ ರಾವ್, ಸುರೇಶ್ ಶೆಟ್ಟಿ ಬನ್ನಂಜೆ, ಸುರಜ್ ಕರ್ಕೇರ, ಪ್ರವೀಣ್ ಜಿ ಕೊಡವೂರು, ಕೃಷ್ಣಮೂರ್ತಿ ಆಚಾರ್ಯ, ಕುಶಲ್ ಶೆಟ್ಟಿ, ನರಸಿಂಹಮೂರ್ತಿ, ನಾಸಿರ್ ಯಾಕೂಬ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರಸಭಾ ಸದಸ್ಯರು, ಮುಂಚೂಣಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು‌.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಕಾರ್ಯಕ್ರಮ ಸ್ವಾಗತಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಮಾರ್ ಮಂಚಿ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಕ್ತಾರರಾದ ಸತೀಶ್ ಕೊಡವೂರು ಅವರು ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ ಅವರು ಕಾರ್ಯಕ್ರಮ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!