KPCC ಪ್ರಚಾರ ಸಮಿತಿಯ ನೂತನ ಅಧ್ಯಕ್ಷ ಸೊರಕೆಗೆ ಅದ್ದೂರಿ ಸ್ವಾಗತ

ಮಂಗಳೂರು: ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ವಿನಯ್ ಕುಮಾರ್ ಸೊರಕೆ ಅವರನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ NSUI ಜಿಲ್ಲಾಧ್ಯಕ್ಷರಾದ ಸೌರಭ್ ಬಲ್ಲಾಳ್, ನಾಯಕರಾದ ಯತೀಶ್ ಕರ್ಕೇರ, ಶರತ್ ಶೆಟ್ಟಿ, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್‌ ರಾಜ್, ಸೂರಜ್ ಕರ್ಕೇರ, ಪ್ರದೀಪ್, ಶೆರಾನ್, ಸುಜನ್, ಫುರ್ಖಾನ್ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!