ಬಸ್ಸಿನಲ್ಲಿ ಬಾಲಕಿಗೆ ಕಿರುಕುಳ- ಆರೋಪಿ ಸೆರೆ

ಭಟ್ಕಳ: ಖಾಸಗಿ ಬಸ್‌ ನಲ್ಲಿ ಬಾಲಕಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಭಟ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹೊನ್ನಾವರ ಮೂಲದ ಸುಬ್ರಹ್ಮಣ್ಯ ಈರಾ ಗೌಡ (35) ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಿಳೆಯೊಬ್ಬರು ಗುರುವಾರ ರಾತ್ರಿ ಖಾಸಗಿ ಬಸ್‌ನಲ್ಲಿ ತನ್ನ 14 ವರ್ಷದ ಮಗಳೊಂದಿಗೆ ಉಡುಪಿಯಿಂದ ಭಟ್ಕಳಕ್ಕೆ ಹಿಂತಿರುಗುತ್ತಿದ್ದರು. ಪ್ರಯಾಣದ ವೇಳೆ ಆರೋಪಿ ಸುಬ್ರಹ್ಮಣ್ಯ ಈರಾ ಗೌಡ ಆಕೆಯ ಮಗಳಿಗೆ ಕಿರುಕುಳ ನೀಡಲು ಯತ್ನಿಸಿದ್ದಾನೆ ಎನ್ನಲಾಗಿದ್ದು, ಮಹಿಳೆ ಮಧ್ಯಪ್ರವೇಶಿಸಿದಾಗ ಆಕೆಯ ಬಳಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಹೇಳಲಾಗಿದೆ.

ಬಸ್ ನಲ್ಲಿದ್ದಾಗಲೇ ಮಹಿಳೆ ಭಟ್ಕಳದಲ್ಲಿರುವ ತನ್ನ ಸಂಬಂಧಿಕರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಭಟ್ಕಳ ತಲುಪಿದಾಗ ಸ್ಥಳೀಯರು ಬಸ್ಸಿನ ಸುತ್ತ ಜಮಾಯಿಸಿ ಆರೋಪಿಯನ್ನು ಹಿಡಿದು ಭಟ್ಕಳ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!