ಕಾಪು: ಪೊಲೀಸ್ ಕ್ವಾಟ್ರಸ್‌ನಲ್ಲಿ ನೇಣಿಗೆ ಶರಣಾದ ಮಹಿಳಾ ಸಿಬ್ಬಂದಿ

ಕಾಪು‌: ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಮಾ.30ರ ಶನಿವಾರ ಮುಂಜಾನೆ ಬೆಳಕಿಗೆ ಬಂದಿದೆ.

ಮೂಲತಃ ಬಾಗಲಕೋಟೆಯ ನಿವಾಸಿ ಜ್ಯೋತಿ (29) ಮೃತ ಮಹಿಳಾ ಪೊಲೀಸ್ ಸಿಬ್ಬಂದಿಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.ಮೃತ ಪೊಲೀಸ್ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದನ್ನು ಗಮನಿಸಿದ್ದರು.

Leave a Reply

Your email address will not be published. Required fields are marked *

error: Content is protected !!